TSK

TSK · ಯೋಹಾನನು 19:9

Treasury of Scripture Knowledge references in ಕನ್ನಡ IRV.

Back to passage

ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.

ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,

ಯೇಸು ಅವರಿಗೆ ‹“ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.›

¶ ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.