TSK

TSK · ಯೋಹಾನನು 3:32

Treasury of Scripture Knowledge references in ಕನ್ನಡ IRV.

Back to passage

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

‹ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.›

ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.

‹ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ”› ಎಂದನು.

ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.