TSK

TSK · ಯೋಹಾನನು 4:20

Treasury of Scripture Knowledge references in ಕನ್ನಡ IRV.

Back to passage

¶ ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.

¶ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.

ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.

ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.

¶ ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.

ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.

ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.