TSK

TSK · ಯೋಹಾನನು 4:32

Treasury of Scripture Knowledge references in ಕನ್ನಡ IRV.

Back to passage

ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.

ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.

ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‹‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’› ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.