TSK

TSK · ಯೋಹಾನನು 5:3

Treasury of Scripture Knowledge references in ಕನ್ನಡ IRV.

Back to passage

ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.

ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.

ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.

ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, ‹“ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.›

¶ ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.