TSK

TSK · ಯೋಹಾನನು 6:31

Treasury of Scripture Knowledge references in ಕನ್ನಡ IRV.

Back to passage

¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.

‹ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.›