TSK

TSK · ಯೋಹಾನನು 7:34

Treasury of Scripture Knowledge references in ಕನ್ನಡ IRV.

Back to passage

ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.

ಆತನು ಅವರಿಗೆ, ‹“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.›

¶ ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, ‹“ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.›

‹ನನ್ನ ಮಕ್ಕಳೇ,›‹ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.›

ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›