TSK

TSK · ಯೋಹಾನನು 8:25

Treasury of Scripture Knowledge references in ಕನ್ನಡ IRV.

Back to passage

“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, ‹“ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.›

ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.

¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.

ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.