TSK

TSK · ಯೆಹೋಶುವ 18:21

Treasury of Scripture Knowledge references in ಕನ್ನಡ IRV.

Back to passage

¶ ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.

ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,

ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.

ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, ‹“ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.›