TSK

TSK · ಯೆಹೋಶುವ 21:1

Treasury of Scripture Knowledge references in ಕನ್ನಡ IRV.

Back to passage

ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.

¶ ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

¶ ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ

ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.