TSK

TSK · ಯೆಹೋಶುವ 7:21

Treasury of Scripture Knowledge references in ಕನ್ನಡ IRV.

Back to passage

ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

¶ ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.

¶ ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.

“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,

ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.

ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ

ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.

ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.›

ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

¶ ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.