TSK

TSK · ನ್ಯಾಯಸ್ಥಾಪಕರು 2:22

Treasury of Scripture Knowledge references in ಕನ್ನಡ IRV.

Back to passage

¶ ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.

ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.