TSK

TSK · ನ್ಯಾಯಸ್ಥಾಪಕರು 20:21

Treasury of Scripture Knowledge references in ಕನ್ನಡ IRV.

Back to passage

¶ ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.

ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?

ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.

¶ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.