TSK

TSK · ಪ್ರಲಾಪಗಳು 3:19

Treasury of Scripture Knowledge references in ಕನ್ನಡ IRV.

Back to passage

ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.

ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.

ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.