TSK

TSK · ಪ್ರಲಾಪಗಳು 5:9

Treasury of Scripture Knowledge references in ಕನ್ನಡ IRV.

Back to passage

¶ ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.

ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.

ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.

“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.