TSK

TSK · ಯಾಜಕಕಾಂಡ 12:3

Treasury of Scripture Knowledge references in ಕನ್ನಡ IRV.

Back to passage

ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.

ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.

ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.

‹ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,›‹ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.›

ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.

ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.