TSK

TSK · ಯಾಜಕಕಾಂಡ 18:5

Treasury of Scripture Knowledge references in ಕನ್ನಡ IRV.

Back to passage

¶ ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,

ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.

ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”

ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.