TSK

TSK · ಯಾಜಕಕಾಂಡ 19:37

Treasury of Scripture Knowledge references in ಕನ್ನಡ IRV.

Back to passage

ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.

¶ “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.

¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.

ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.