TSK

TSK · ಯಾಜಕಕಾಂಡ 21:1

Treasury of Scripture Knowledge references in ಕನ್ನಡ IRV.

Back to passage

¶ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

¶ “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

¶ “ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.

¶ ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.