TSK

TSK · ಯಾಜಕಕಾಂಡ 23:29

Treasury of Scripture Knowledge references in ಕನ್ನಡ IRV.

Back to passage

ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.

ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.