TSK

TSK · ಯಾಜಕಕಾಂಡ 24:7

Treasury of Scripture Knowledge references in ಕನ್ನಡ IRV.

Back to passage

ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.

ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಯೇಸು ಅವರಿಗೆ ‹“ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ›‹ಬಾಯಾರಿಕೆಯಾಗುವುದಿಲ್ಲ.›

ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.