TSK

TSK · ಯಾಜಕಕಾಂಡ 25:21

Treasury of Scripture Knowledge references in ಕನ್ನಡ IRV.

Back to passage

ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.

ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.

¶ “‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.

¶ ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.