TSK

TSK · ಯಾಜಕಕಾಂಡ 27:2

Treasury of Scripture Knowledge references in ಕನ್ನಡ IRV.

Back to passage

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,

¶ “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ

¶ ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.

ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.

ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.

ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.