TSK

TSK · ಯಾಜಕಕಾಂಡ 6:19

Treasury of Scripture Knowledge references in ಕನ್ನಡ IRV.

Back to passage

“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.

ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

¶ ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.