TSK

TSK · ಯಾಜಕಕಾಂಡ 8:11

Treasury of Scripture Knowledge references in ಕನ್ನಡ IRV.

Back to passage

ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.

ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.

ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.