TSK

TSK · ಯಾಜಕಕಾಂಡ 9:7

Treasury of Scripture Knowledge references in ಕನ್ನಡ IRV.

Back to passage

ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.

ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.

¶ ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.

ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.