TSK

TSK · ಲೂಕನು 1:25

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.

¶ ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.

ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.

ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.

ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.