TSK

TSK · ಲೂಕನು 1:39

Treasury of Scripture Knowledge references in ಕನ್ನಡ IRV.

Back to passage

¶ ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.

ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.