TSK

TSK · ಲೂಕನು 10:41

Treasury of Scripture Knowledge references in ಕನ್ನಡ IRV.

Back to passage

ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?

‹ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.›

¶ ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, ‹“ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.›

ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.