TSK

TSK · ಲೂಕನು 13:23

Treasury of Scripture Knowledge references in ಕನ್ನಡ IRV.

Back to passage

ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.

‹ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ”› ಅಂದನು.

ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.

ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,

ಆತನು ಅವರಿಗೆ, ‹“ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.›