TSK

TSK · ಲೂಕನು 13:32

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.

ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.

ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.

¶ ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,

ಯೇಸು ಅವರಿಗೆ, ‹“ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?”› ಎಂದು ಕೇಳಿದ್ದಕ್ಕೆ,

‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.