TSK

TSK · ಲೂಕನು 16:22

Treasury of Scripture Knowledge references in ಕನ್ನಡ IRV.

Back to passage

ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.

ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.

ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.

ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.

ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.

ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›

‹ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.›

¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›

¶ ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.

¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.