TSK

TSK · ಲೂಕನು 2:46

Treasury of Scripture Knowledge references in ಕನ್ನಡ IRV.

Back to passage

ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.

¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,

ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.