TSK

TSK · ಲೂಕನು 2:49

Treasury of Scripture Knowledge references in ಕನ್ನಡ IRV.

Back to passage

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,

ಯೇಸು ಅವರಿಗೆ ‹“ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.›

‹ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.›

‹ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.›