TSK

TSK · ಲೂಕನು 20:1

Treasury of Scripture Knowledge references in ಕನ್ನಡ IRV.

Back to passage

¶ ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ‹“ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;›

¶ ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,

ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›

ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.