TSK

TSK · ಲೂಕನು 20:28

Treasury of Scripture Knowledge references in ಕನ್ನಡ IRV.

Back to passage

ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.

ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.

ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.