TSK

TSK · ಲೂಕನು 21:18

Treasury of Scripture Knowledge references in ಕನ್ನಡ IRV.

Back to passage

ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.

¶ ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.

‹ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.›