TSK

TSK · ಲೂಕನು 21:27

Treasury of Scripture Knowledge references in ಕನ್ನಡ IRV.

Back to passage

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

‹ಆಗ›‹ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.›

ಯೇಸು ಪ್ರತ್ಯುತ್ತರವಾಗಿ, ‹“ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ”› ಅಂದನು.

ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.

¶ ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.