TSK

TSK · ಲೂಕನು 22:17

Treasury of Scripture Knowledge references in ಕನ್ನಡ IRV.

Back to passage

ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.

¶ ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, ‹“ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ”› ಅಂದನು.

ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.