TSK

TSK · ಲೂಕನು 3:33

Treasury of Scripture Knowledge references in ಕನ್ನಡ IRV.

Back to passage

ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು.

ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.

ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.