TSK

TSK · ಲೂಕನು 3:9

Treasury of Scripture Knowledge references in ಕನ್ನಡ IRV.

Back to passage

“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?

ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

‹ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.›

‹ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.›

ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.