TSK

TSK · ಲೂಕನು 7:24

Treasury of Scripture Knowledge references in ಕನ್ನಡ IRV.

Back to passage

¶ ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,

ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.

ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.

ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.

ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.