TSK

TSK · ಲೂಕನು 7:27

Treasury of Scripture Knowledge references in ಕನ್ನಡ IRV.

Back to passage

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

‹‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.›

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.