TSK

TSK · ಲೂಕನು 8:6

Treasury of Scripture Knowledge references in ಕನ್ನಡ IRV.

Back to passage

¶ “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.

‹ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,›

¶ ‹“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;›

ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”