TSK

TSK · ಲೂಕನು 9:28

Treasury of Scripture Knowledge references in ಕನ್ನಡ IRV.

Back to passage

ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.

ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.

ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.

¶ ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.

¶ ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, ‹“ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?”› ಎಂದು ಶಿಷ್ಯರನ್ನು ಕೇಳಲು,

¶ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.