TSK

TSK · ಮಲಾಕಿಯ 1:3

Treasury of Scripture Knowledge references in ಕನ್ನಡ IRV.

Back to passage

¶ ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,

ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.

ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.

ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.

ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.

ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.

ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.

ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.

ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.

ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.