TSK

TSK · ಮಾರ್ಕನು 1:13

Treasury of Scripture Knowledge references in ಕನ್ನಡ IRV.

Back to passage

ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;

¶ ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.

ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.