TSK

TSK · ಮಾರ್ಕನು 1:26

Treasury of Scripture Knowledge references in ಕನ್ನಡ IRV.

Back to passage

ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.

ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.

‹ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.›