TSK

TSK · ಮಾರ್ಕನು 1:3

Treasury of Scripture Knowledge references in ಕನ್ನಡ IRV.

Back to passage

ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”

ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

¶ ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,