TSK

TSK · ಮಾರ್ಕನು 10:22

Treasury of Scripture Knowledge references in ಕನ್ನಡ IRV.

Back to passage

ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.

¶ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು

ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.

ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.

ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.